ಬೆಂಗಳೂರು : ನಿರ್ಮಾಪಕ ಶೈಲೇಂದ್ರ ಬಾಬು ಅವರ ಪುತ್ರ, ನಟ ಸುಮಂತ್ ಅವರು ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಶ್ರೀನಿವಾಸ್ ಮತ್ತು ಚಂದ್ರಕಲಾ ಅವರ ಪುತ್ರಿ ಅನಿತಾ ಅವರನ್ನು ಸುಮಂತ್ ಅವರು ಬೆಂಗಳೂರಿನ ಅರಮನೆ ಮೈದಾನದಲ್ಲಿ ವಿವಾಹವಾಗಿ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ. ಸ್ಯಾಂಡಲ್ ವುಡ್ ನ ಗಣ್ಯರು ಮದುವೆಗೆ ಆಗಮಿಸಿ ನವಜೋಡಿಗೆ ಶುಭ ಹಾರೈಸಿದ್ದಾರೆ. ಸುಮಂತ್ ಅವರು ದಿಲ್ ವಾಲ, ತಿರುಪತಿ ಎಕ್ಸ್‌ಪ್ರೆಸ್, ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.










