ಕೋಲಾರ: ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಚಾಲನೆ ನೀಡಿ, ಎಂ.ವಿ.ಕೆ ಗೋಲ್ಡನ್ ಡೈರಿಗೆ ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಕೃಷಿ ಸಚಿವ ಎನ್.ಹೆಚ್.ಶಿವಶಂಕರ್ ರೆಡ್ಡಿ, ಶಾಸಕರು ಹಾಗೂ ಕೋಲಾರ- ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಒಕ್ಕೂಟದ ಅಧ್ಯಕ್ಷರಾದ ಕೆ.ವೈ. ನಂಜೇಗೌಡ ಸೇರಿದಂತೆ ಇತರರು ಉಪಸ್ಥಿತರಿದ್ದರು.










