ಚಿಕ್ಕಮಗಳೂರು – ಜಿಲ್ಲೆಯ ಬಯಲು ಸೀಮಗೆ ನೀರುಣಿಸುವ ಕರಗಡ ಕುಡಿಯುವ ನೀರಿನ ಯೋಜನೆ ಬಗ್ಗೆ ಸ್ಥಳೀಯ ರೈತರೊಂದಿಗೆ ಮುಖ್ಯಮಂತ್ರಿಗಳ ಮಹತ್ವದ ಸಭೆ ಬೆಂಗಳೂರಿನಲ್ಲಿಂದು ನಡೆಯಲಿದೆ.ಈ ಸಂಬಂಧ ವಿಧಾನಪರಿಷತ್ ಸದಸ್ಯ ಸೋದರರಾದ ಎಸ್.ಎಲ್.ಧರ್ಮೇಗೌಡ ಮತ್ತು ಎಸ್.ಎಲ್.ಭೋಜೇಗೌಡ ಅವರ ನೇತೃತ್ವದಲ್ಲಿ ಸ್ಥಳೀಯ ರೈತರು ಮತ್ತು ವಿವಿಧ ಪಕ್ಷಗಳ ಮುಖಂಡರ ನಿಯೋಗ ಬೆಂಗಳೂರಿಗೆ ತೆರಳಿದ್ದು, ಸಂಜೆ 6 ಗಂಟೆಗೆ ವಿಧಾನಸೌಧದ ಮೂರನೇ ಮಹಡಿಯಲ್ಲಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಸಭೆಯಲ್ಲಿ ಪಾಲ್ಗೊಳ್ಳಲಿದೆ.