ನವದೆಹಲಿ: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರು ಇಂದು ಮೂವತ್ತನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ವಿರಾಟ್ ಕೊಹ್ಲಿ ಅವರು ತಮ್ಮ ಪತ್ನಿ ಅನುಷ್ಕಾ ಶರ್ಮಾ ಜೊತೆ ಉತ್ತರಾಖಂಡದ ಹರಿದ್ವಾರದ ಆಶ್ರಮದಲ್ಲಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ.ಪತಿಯ ಹುಟ್ಟುಹಬ್ಬಕ್ಕೆ ಪತ್ನಿ ಅನುಷ್ಕಾ ಶರ್ಮಾ ಅವರು ಟ್ವಿಟ್ ಮೂಲಕ ಅವನ ಹುಟ್ಟಿಗೆ ದೇವರಿಗೆ ಧನ್ಯವಾದಗಳು ಎಂದು ತಿಳಿಸಿದ್ದಾರೆ.











