ಮೂಡಿಗೆರೆ : ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿರುವ ಪ್ರಮೋದ್ ಮಧ್ವರಾಜ್ ಅವರು ಇಂದು ಮಧ್ಯಾಹ್ನ 2:30 ಕ್ಕೆ ಮೂಡಿಗೆರೆ ಕಾಂಗ್ರೆಸ್ ಪಕ್ಷದ ಕಚೇರಿಗೆ ಭೇಟಿ ನೀಡಿ ಪಕ್ಷದ ನಾಯಕರು, ಗ್ರಾಮ ಪಂಚಾಯಿತಿ ಸದಸ್ಯರು , ಚುನಾಯಿತ ಪ್ರತಿನಿಧಿಗಳು ಹಾಗೂ ಪದಾಧಿಕಾರಿಗಳ ಸಮ್ಮುಖದಲ್ಲಿ ಸಭೆ ನಡೆಸಲಿದ್ದಾರೆ ಎಂದು ಮೂಡಿಗೆರೆ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸಂಪತ್ ಬಿಳಗುಳ ಅವರು ತಿಳಿಸಿದ್ದಾರೆ.










