ಇಂದಿನಿಂದ ರಾಜ್ಯಕ್ಕೆ ಹಿಂಗಾರು ಪ್ರವೇಶ…

646
firstsuddi

ಬೆಂಗಳೂರು: ತಮಿಳುನಾಡಿನಲ್ಲಿ ಈಶಾನ್ಯ ಮಾರುತದಿಂದಾಗಿ ಭಾರಿ ಮಳೆಯಾಗುತ್ತಿದ್ದು, ಇಂದಿನಿಂದ ಹಿಂಗಾರು ಮಳೆ ರಾಜ್ಯಕ್ಕೆ ಪ್ರವೇಶ ಆಗಲಿದೆ. ಬೆಂಗಳೂರು, ರಾಮನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಸೇರಿದಂತೆ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಇಂದು ಸಂಜೆ ಮತ್ತು ನಾಳೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.