ಭಾರತೀಯ ಪ್ರಜಾಪ್ರಭುತ್ವದ ಘನತೆಯನ್ನು ಗಾಂಭೀರ್ಯವನ್ನು ಗಮನದಲ್ಲಿಟ್ಟುಕೊಂಡು ಚುನಾವಣೆ ಎದುರಿಸುತ್ತಿದ್ದೇನೆ:ಸುಮಲತಾ ಅಂಬರೀಶ್…

174
firstsuddi

ಬೆಂಗಳೂರು : ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ನಾನು ಸೌಮ್ಯವಾಗಿ ಪ್ರೀತಿಯಿಂದ ಭಾರತೀಯ ಪ್ರಜಾಪ್ರಭುತ್ವದ ಘನತೆಯನ್ನು ಗಾಂಭೀರ್ಯವನ್ನು ಗಮನದಲ್ಲಿಟ್ಟುಕೊಂಡು ಚುನಾವಣೆ ಎದುರಿಸುತ್ತಿದ್ದೇನೆ ಎಂದು ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಪೋಸ್ಟ್ ನಲ್ಲಿ ಏನಿದೆ?
ನಾನು ಸೌಮ್ಯವಾಗಿ ಪ್ರೀತಿಯಿಂದ ..ಭಾರತೀಯ ಪ್ರಜಾಪ್ರಭುತ್ವದ ಘನತೆಯನ್ನು ಗಾಂಭೀರ್ಯವನ್ನು ಗಮನದಲ್ಲಿಟ್ಟುಕೊಂಡು ಚುನಾವಣೆ ಎದುರಿಸುತ್ತಿದ್ದೇನೆ ..ನಾನು ದಬ್ಬಾಳಿಕೆಗಳಿಗೆ ಬೆದರಿಕೆಗಳಿಗೆ ಬಗ್ಗದ ಜಗ್ಗದ ..ಪ್ರಜಾಪ್ರಭುತ್ವವನ್ನು ಉಳಿಸುವ ಸಲುವಾಗಿ .ಅತ್ಯಂತ ಉದಾತ್ತವಾದ ಆದರ್ಶಗಳನ್ನು ಮುಂದಿಟ್ಟುಕೊಂಡು ಚುನಾವಣೆಯನ್ನು ಎದುರಿಸುವ ನಡೆಸುವ ಮನಸ್ಥಿತಿಯಿಂದ ಚುನಾವಣಾ ಕಣದಲ್ಲಿದ್ದೇನೆ ಮಂಡ್ಯದ ನನ್ನ ಪ್ರೀತಿಯ ಜನರು ಇದನ್ನು ಸ್ವೀಕರಿಸುತ್ತಾರೆ ಎಂದು ನನ್ನ ಬಲವಾದ ನಂಬಿಕೆ ಇದೆ  ಎಂದು ಸುಮಲತಾ ಅಂಬರೀಶ್ ಅವರು ಪೋಸ್ಟ್ ಮಾಡಿದ್ದಾರೆ.