ಟ್ರಾಕ್ಟರ್ ಪಲ್ಟಿ ,ಸ್ಥಳದಲ್ಲೇ ಚಾಲಕನ ಸಾವು…

729
firstsuddi

ಮೂಡಿಗೆರೆ- ತಾಲೂಕಿನ ದುಂಡುಗ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಟ್ರಾಕ್ಟರ್ ಪಲ್ಟಿಯಾಗಿದ್ದು, ಸುರೇಶ್ (55) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರವಿ ಎಂಬುವವರ ತೋಟದಲ್ಲಿ ಹಲವು ವರ್ಷಗಳಿಂದ ಚಾಲಕನಾಗಿ ಕೆಲಸ ಮಾಡುತ್ತಿದ್ದು,ರವಿ ಅವರಿಗೆ ಸೇರಿದ ಟ್ರ್ಯಾಕ್ಟರ್ ಎಂದು ತಿಳಿದು ಬಂದಿದ್ದು ,ಘಟನೆ ಮೂಡಿಗೆರೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸರ್ಕಲ್ ಇನ್ ಸ್ಪೆಕ್ಟರ್ ಜಗದೀಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.