ಬಿಹಾರ : ಕಾರು ಮತ್ತು ಟ್ರ್ಯಾಕ್ಟರ್ ನಡುವೆ ಭೀಕರ ಅಪಘಾತ ಸಂಭವಿಸಿ 12 ಮಂದಿ ಮೃತಪಟ್ಟಿರುವ ಘಟನೆ ಮುಜಾಫರ್‍ಪುರ್ ಜಿಲ್ಲೆಯಲ್ಲಿ ನಡೆದಿದೆ. ಇಂದು ಮುಂಜಾನೆ ರಾಷ್ಟ್ರೀಯ ಹೆದ್ದಾರಿ-28 ರಲ್ಲಿ ಈ ಭೀಕರ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಮೃತಪಟ್ಟವರ ಮಾಹಿತಿ ಇನ್ನು ತಿಳಿದು ಬಂದಿಲ್ಲ. ಘಟನೆಯಲ್ಲಿ ನಾಲ್ವರು ಗಂಭೀರ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಕಾಂತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.










