ಬೆಂಗಳೂರು: ಬಿಗ್ ಬಾಸ್ ಖ್ಯಾತಿಯ ಸುನಾಮಿ ಕಿಟ್ಟಿ ತನ್ನ ಸ್ನೇಹಿತರ ಜೊತೆ ಭಾನುವಾರ ರಾತ್ರಿ ಮದ್ಯಪಾನ ಮಾಡಲು ರೆಸ್ಟೋರೆಂಟ್ ಗೆ ಹೋಗಿದ್ದರು. ಈ ವೇಳೆ ರೆಸ್ಟೋರೆಂಟ್ ಸಿಬ್ಬಂದಿ ಬಳಿ ಕಿಟ್ಟಿ ಸಿಂಗಲ್ ಸಿಗರೇಟ್ ಕೇಳಿದ್ದಾರೆ. ಅದಕ್ಕೆ ಸಿಂಗಲ್ ಸಿಗರೇಟ್ ಸಿಗಲ್ಲ ಪ್ಯಾಕ್ ತೆಗೆದುಕೊಳ್ಳುವಂತೆ ಸಿಬ್ಬಂದಿ ಹೇಳಿದ್ದಾರೆ. ಈ ವಿಚಾರವಾಗಿ ಸುನಾಮಿ ಕಿಟ್ಟಿ ಹಾಗೂ ರೆಸ್ಟೋರೆಂಟ್ ಸಿಬ್ಬಂದಿ ನಡುವೆ ಗಲಾಟೆ ನಡೆದಿದ್ದು, ಕಿಟ್ಟಿ ರೆಸ್ಟೋರೆಂಟ್ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಈ ಬಗ್ಗೆ ರೆಸ್ಟೋರೆಂಟ್ ಸಿಬ್ಬಂದಿ ಯಾವುದೇ ದೂರು ನೀಡಿರಲಿಲ್ಲ. ಆದರೆ ವಿಡಿಯೋ ವೈರಲ್ ಆದ ಹಿನ್ನಲೆಯಲ್ಲಿ ಸುಬ್ರಹ್ಮಣ್ಯ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಸುನಾಮಿ ಕಿಟ್ಟಿಯನ್ನು ಬಂಧಿಸಿದ್ದು, ನಂತರ ಎಚ್ಚರಿಕೆ ನೀಡಿ ಜಾಮೀನನ ಮೇಲೆ ಬಿಡುಗಡೆ ಮಾಡಿದ್ದಾರೆ.










