ಮಹಾಮಾರಿ ಕೊರೊನಾ ವೈರಸ್‍ಗೆ ಇಬ್ಬರು ಬಿಎಸ್ಎಫ್ ಯೋಧರು ಬಲಿ…

163
firstsuddi

ನವದೆಹಲಿ : ದೇಶದಲ್ಲಿ ಮಹಾಮಾರಿ ಕೊರೊನಾ ವೈರಸ್ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಇಂದು ಬಿಎಸ್ಎಫ್ನ ಇಬ್ಬರು ಯೋಧರು ಮಹಾಮಾರಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಅಲ್ಲದೇ ಹೊಸದಾಗಿ 41 ಮಂದಿ ಯೋಧರಲ್ಲಿ ಸೋಂಕು ತಗುಲಿರುವುದು ದೃಢವಾಗಿದ್ದು, ಬಿಎಸ್ಎಫ್ನಲ್ಲಿ ಒಟ್ಟು 193 ಮಂದಿ ಯೋಧರಿಗೆ ಸೋಂಕು ತಗುಲಿದೆ. ಹಾಗೂ 441 ಮಂದಿ ಸಿ.ಆರ್.ಪಿ.ಎಫ್ ಯೋಧರು ಕೊರೊನಾ ಸೋಂಕಿಗೆ ತುತ್ತಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ದೇಶದಲ್ಲಿ ಈವರೆಗೂ 52,952 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, 1783 ಮಂದಿ ಬಲಿಯಾಗಿದ್ದಾರೆ ಹಾಗೂ 15,266 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.