ಶ್ರೀನಗರ : ಜಮ್ಮು ಕಾಶ್ಮೀರಾದ ಬಾರಾಮುಲ್ಲಾ ಜಿಲ್ಲೆಯಲ್ಲಿ ಪಾಕ್‍ನ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದ ಇಬ್ಬರು ಯೋಧರು ಇಂದು ಹುತಾತ್ಮರಾಗಿದ್ದಾರೆ. ಬಾರಾಮುಲ್ಲಾ ಜಿಲ್ಲೆಯ ರಾಮ್ಪುರ್ ಸೆಕ್ಟರ್ ಬಳಿ ಇರುವ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೈನಿಕರು ಭಾರತೀಯ ಯೋಧರನ್ನು ಗುರಿಯಾಗಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿಯನ್ನು ನಡೆಸಿದ್ದರು. ಈ ದಾಳಿಯಲ್ಲಿ ಭಾರತೀಯ ಸೇನೆಯ ಮೂವರು ಯೋಧರು ಗಂಭೀರವಾಗಿ ಗಾಯಗೊಂಡಿದ್ದರು. ಮೂವರು ಯೋಧರ ಪೈಕಿ ಇಬ್ಬರು ಯೋಧರು ಚಿಕಿತ್ಸೆ ಫಲಕಾರಿಯಾಗದೆ ಇಂದು ಹುತಾತ್ಮರಾಗಿದ್ದಾರೆ ಎಂದು ರಕ್ಷಣಾ ವಕ್ತಾರ ಕರ್ನಲ್ ರಾಜೇಶ್ ಕಾಲಿಯಾ ಅವರು ತಿಳಿಸಿದ್ದಾರೆ.










