ಮುಂಬೈ: ಅಂಧೇರಿ ಉಪನಗರದ ವೀರ ದೇಸಾಯಿ ರಸ್ತೆಯ ಕದಮ್ ಚಾವ್ಲ್ ಎಸ್ ಆರ್ ಎ ಕಟ್ಟಡದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಇಬ್ಬರು ಸಜೀವ ದಹನವಾಗಿರುವ ಘಟನೆ ನಡೆದಿದೆ. ಹನ್ನೊಂದು ಮಹಡಿ ಕಟ್ಟಡದ ಹತ್ತನೇ ಮಹಡಿಯಲ್ಲಿ ಇದ್ದಕ್ಕಿದ್ದಂತೇ ಬೆಂಕಿ ಕಾಣಿಸಿಕೊಂಡಿದ್ದು, ಇಬ್ಬರು ಸಜೀವ ದಹನವಾಗಿದ್ದಾರೆ. ತಕ್ಷಣವೇ ಅಗ್ನಿ ಶಾಮಕದಳದ ಸಿಬ್ಬಂದಿ ದೌಡಾಯಿಸಿ ಮೂವರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.










