ತಮಿಳುನಾಡು: ಸೇಲಂ ಬಳಿ ಎರಡು ಖಾಸಗಿ ಬಸ್ ಗಳ ಮುಖಾಮುಖಿ ಡಿಕ್ಕಿಯಾಗಿ ಏಳು ಜನರು ಸಾವನ್ನಪ್ಪಿದ್ದು, 37ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.ಬೆಂಗಳೂರಿನಿಂದ ಸೇಲಂ ಕಡೆಗೆ ತೆರಳುತ್ತಿದ್ದ ಬಸ್ ಹಾಗೂ ಸೇಲಂನಿಂದ ಧರ್ಮಪುರಿಗೆ ತೆರಳುತ್ತಿದ್ದ ಬಸ್ ನಡುವೆ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದ್ದು, ಮೂವರು ಕರ್ನಾಟಕದವರು ಸೇರಿ ಏಳು ಮಂದಿ ಪ್ರಯಾಣಿಕರು ಮೃತಪಟ್ಟಿದ್ದಾರೆ.
ಅವಘಡ ನಡೆದ ಕೂಡಲೆ ಸ್ಥಳೀಯರು ರಕ್ಷಣಾ ಕಾರ್ಯ ನಡೆಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸುವಲ್ಲಿ ನೆರವಾಗಿದ್ದಾರೆ. ಜಿಲ್ಲಾಧಿಕಾರಿ ಮತ್ತು ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. ಮೃತ ದುರ್ದೈವಿಗಳ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ.