ಮಂಗಳೂರು : ಕಟ್ಟಡ ಕಾಮಗಾರಿ ವೇಳೆ ಭೂಕುಸಿತ ಸಂಭವಿಸಿ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬಂಟ್ಸ್ ಹಾಸ್ಟೆಲ್ ಸರ್ಕಲ್ ಬಳಿ ನಡೆದಿದೆ. ಪ.ಬಂಗಾಳ ಮೂಲದ ಮಸೂದ್(28) ಹಾಗೂ ಬಾಗಲಕೋಟೆ ಮೂಲದ ಬೀಮಣ್ಣ(35) ಮೃತ ಕಾರ್ಮಿಕರು ಎಂದು ಗುರುತಿಸಲಾಗಿದ್ದು, ಉದ್ಯಮಿ ಎ.ಜೆ. ಶೆಟ್ಟಿ ಅವರಿಗೆ ಸೇರಿದ ನಿರ್ಮಾಣ ಹಂತದ ಕಟ್ಟಡ ಇದಾಗಿದ್ದು, ಕಟ್ಟಡ ಕಾಮಗಾರಿ ವೇಳೆ ಏಕಾಏಕಿ ಭೂಕುಸಿತವಾದ ಪರಿಣಾಮ ಈ ಘಟನೆ ಸಂಭವಿಸಿದೆ. ಇನ್ನೂ ಓರ್ವ ಕಾರ್ಮಿಕ ಮಣ್ಣಿನ ಅಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಅಗ್ನಿಶಾಮಕದಳ ಸಿಬ್ಬಂದಿ ರಕ್ಷಣಾ ಕಾರ್ಯ ಮುಂದುವರೆಸಿ ಇಬ್ಬರ ಮೃತದೇಹವನ್ನು ಹೊರತೆಗೆದಿದ್ದು, ಇನ್ನೋರ್ವ ಕಾರ್ಮಿಕನಿಗಾಗಿ ರಕ್ಷಣಾ ಕಾರ್ಯ ಮುಂದುವರೆಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಶಾಸಕ ವೇದವ್ಯಾಸ ಕಾಮತ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.










