ಉಮೇಶ್ ಕತ್ತಿ ಅವರ ಹೇಳಿಕೆ ಸರಿಯಲ್ಲ : ಬಿ ಎಸ್ ಯಡಿಯೂರಪ್ಪ…

271
firstsuddi

ವಿಜಯಪುರ: ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಅವರು ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರ್ಕಾರ ಬಿದ್ದರೆ ನಾವು ರಚನೆ ಮಾಡುವ ಬಗ್ಗೆ ಯೋಚನೆ ಮಾಡುತ್ತೇವೆ. ಆಪರೇಷನ್ ಕಮಲ ಮಾಡುತ್ತಿದ್ದೇವೆಂದು ನಾನು ಹೇಳಿಲ್ಲ. ನಮ್ಮ ನಾಯಕರು ಹೇಳಿಲ್ಲ. ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ನಾವು ಸೆಳೆಯುವ ಪ್ರಯತ್ನ ಮಾಡುತ್ತಿಲ್ಲ. ಆಪರೇಷನ್ ಕಮಲ ದ ಅವಶ್ಯಕತೆಯೂ ನಮಗೆ ಇಲ್ಲ. ನಾವು ರಾಜಕೀಯ ಸನ್ಯಾಸಿಗಳಲ್ಲ. ಅವರಾಗಿಯೇ ಬಂದರೆ ನಾವು  ನಿರ್ಣಯ ಕೈಗೊಳ್ಳುತ್ತೇವೆ   ಎಂದಿದ್ದಾರೆ. ಉಮೇಶ್ ಕತ್ತಿ ಹೇಳಿಕೆಗೆ ಪ್ರತಿಕ್ರಯಿಸಿದ ಯಡಿಯೂರಪ್ಪ ಅವರು ಉಮೇಶ್ ಕತ್ತಿ ಅವರ ಹೇಳಿಕೆ ಸರಿಯಲ್ಲ ಎಂದಿದ್ದಾರೆ.