ನವದೆಹಲಿ : ಕೊರೊನಾ ವೈರಸ್ ಸೋಂಕಿನಿಂದ ಗುಣಮುಖರಾಗಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಮಿತ್ ಶಾ ಅವರಿಗೆ ಕಳೆದ 4 ದಿನಗಳಿಂದ ಮೈ-ಕೈ ನೋವು ಕಾಣಿಸಿಕೊಂಡಿದ್ದು, ಇದರಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ. ಈ ಹಿಂದೆ ಅಮಿತ್ ಶಾ ಅವರಿಗೆ ಕೊರೊನಾ ಸೋಂಕು ತಗುಲಿದ್ದರಿಂದ ದೆಹಲಿಯ ಮೆದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು. ಆದರೆ ಈಗಾ ಅವರಿಗೆ ಮೈ-ಕೈ ನೋವು ಹಾಗೂ ಸುಸ್ತು ಕಾಣಿಸಿಕೊಂಡ ಹಿನ್ನೆಲೆ, ಪೋಸ್ಟ್ ಕೋವಿಡ್ ಕೇರ್ಗೆ ದಾಖಲಿಸಿಕೊಳ್ಳಲಾಗಿದ್ದು, ಆಸ್ಪತ್ರೆಯಿಂದಲೇ ಕಾರ್ಯ ನಿರ್ವಹಿಸಲಿದ್ದಾರೆ ಎನ್ನಲಾಗಿದೆ.










