ಇಂದು ಭಾರತಕ್ಕೆ ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಗಮನ…

237
firstsuddi

ನವದೆಹಲಿ : ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತಮ್ಮ ಕುಟುಂಬ ಸಮೇತ ಇಂದು ಭಾರತಕ್ಕೆ ಆಗಮಿಸಲಿದ್ದು, 36 ಗಂಟೆಗಳ ಐತಿಹಾಸಿಕ ಭಾರತ ಪ್ರವಾಸವನ್ನು ಕೈಗೊಂಡಿದ್ದಾರೆ. ಇಂದು ಬೆಳಿಗ್ಗೆ 11:40ಕ್ಕೆ ಗುಜರಾತ್‍ನ ಅಹಮದಾಬಾದ್‍ನಲ್ಲಿರುವ ಸರ್ದಾರ್ ವಲ್ಲಭಭಾಯ್ ಪಟೇಲ್ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿರುವ ಡೊನಾಲ್ಡ್ ಟ್ರಂಪ್, ಪತ್ನಿ ಮೆಲಾನಿಯಾ, ಪುತ್ರಿ ಇವಾಂಕಾ ಹಾಗೂ ಅಳಿಯ ಜ್ಯಾರೆಡ್ ಕುಶ್ನರ್ ಅವರನ್ನು ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ಸ್ವಾಗತಿಸಲಿದ್ದಾರೆ. ಬಳಿಕ ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಹಾಗೂ ಟ್ರಂಪ್ ಅವರು 22 ಕಿ.ಮೀ ರೋಡ್ ಶೋ ನಡೆಸಲಿದ್ದು, ಬಳಿಕ ವಿಶ್ವದಲ್ಲಿಯೇ ದೊಡ್ಡದಾಗಿರುವ ಮೊಟೆರಾ ಸ್ಟೇಡಿಯಂನ್ನು ಟ್ರಂಪ್ ಅವರು ಉದ್ಘಾಟಿಸಿ “ನಮಸ್ತೆ ಟ್ರಂಪ್” ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.