ಉತ್ತರ ಪ್ರದೇಶ: ರೈಲು ಹಳಿ ತಪ್ಪಿದ ಪರಿಣಾಮ 7 ಮಂದಿ ದುರ್ಮರಣ…

248
firstsuddi

ರಾಯ್​ಬರೇಲಿ: ರೈಲು ಹಳಿತಪ್ಪಿದ ಪರಿಣಾಮ 7 ಮಂದಿ ಮೃತಪಟ್ಟು, 20ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ರಾಯ್​ಬರೇಲಿ ಜಿಲ್ಲೆಯ ಹರ್​ಚಂದ್​ಪುರ ರೈಲ್ವೆ ನಿಲ್ದಾಣದ ಬಳಿ ನಡೆದಿದೆ. ಮಾಲ್ಡಾ ಟೌನ್ ನಿಂದ ದೆಹಲಿಗೆ ಬರುವ ಮಾರ್ಗದಲ್ಲಿ ನ್ಯೂ ಫರಕ್ಕಾ ಎಕ್ಸ್‌ಪ್ರೆಸ್‌ ರೈಲು ಇಂದು ಬೆಳಗ್ಗೆ ಹಳಿ ತಪ್ಪಿದ್ದು, ಪರಿಣಾಮವಾಗಿ ಏಳು ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದು, 20ಕ್ಕೂ ಅಧಿಕ ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.  ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳಕ್ಕೆ ಎನ್‌ಡಿಆರ್‌ಎಫ್ ತಂಡ ದೌಡಾಯಿಸಿದ್ದು ರಕ್ಷಣಾ ಕಾರ್ಯಚರಣೆಯನ್ನು ನಡೆಸುತ್ತಿದೆ.