ಉತ್ತರ ಪ್ರದೇಶ –ರಾಜ್ಯದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಉಂಟಾಗಿದ್ದು, ಭಾರತೀಯ ಸೇನೆ ಜನರ ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತವಾಗಿದೆ. ಪ್ರವಾಹದಿಂದ 16 ಮಂದಿ ಮೃತಪಟ್ಟಿದ್ದು, 12 ಮಂದಿ ಗಾಯಗೊಂಡಿದ್ದಾರೆ. ಇನ್ನೂ ಎರಡು ದಿನ ಉತ್ತರ ಪ್ರದೇಶದೆಲ್ಲೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಲಲಿತ್ಪುರ್ ಮತ್ತು ಝಾನ್ಸಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಭಾರತೀಯ ಸೇನೆ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದು, ಜನರನ್ನು ಸುರಕ್ಷಿತ ಪ್ರದೇಶಗಳತ್ತ ಸ್ಥಳಾಂತರಿಸಲಾಗುತ್ತಿದೆ.