ಉಡುಪಿ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ವಿವಿಧ ಕ್ರೀಡಾಕೂಟ…

158

ಉಡುಪಿ: ಇಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನೆಲೆ ಮಹಿಳಾ ದಿನವನ್ನು ವಿವಿಧೆಡೆ  ಸಂತಸದಿಂದ  ಆಚರಿಸಲಾಗುತ್ತಿದೆ. ಮಹಿಳಾ ದಿನಾಚರಣೆ ಪ್ರಯುಕ್ತ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾನ ಜಾಗೃತಿಗೆ ವಿವಿಧ ಕ್ರೀಡಾಕೂಟ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ನಡೆದ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಜಿಲ್ಲಾಧಿಕಾರಿ ಹೆಫ್ಸಿಬಾ ರಾಣಿ, ಸಿ.ಇ.ಓ ಸಿಂಧು ರೂಪೇಶ್, ಎಸ್.ಪಿ ನಿಶಾ ಜೇಮ್ಸ್, ಅಪರ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಭಾಗವಹಿಸಿದ್ದು ವಿಶೇಷವಾಗಿತ್ತು ಹಾಗೂ ಕಾರ್ಯಕ್ರಮದಲ್ಲಿ ಭಾಗಿಯಾದ ಮಹಿಳೆಯರಲ್ಲಿ ಸಂತಸ ಮೂಡಿತ್ತು.