ಹಿರಿಯ ನಟಿ ಕಿಶೋರಿ ಬಲ್ಲಾಳ್ ವಿಧಿವಶ…

176
firstsuddi

ಬೆಂಗಳೂರು : ರಂಗಭೂಮಿ ಕಲಾವಿದೆ, ಹಿರಿಯ ನಟಿ ಕಿಶೋರಿ ಬಲ್ಲಾಳ್ ಅವರು ವಯೋಸಹಜ ಕಾಯಿಲೆಯಿಂದ ಇಂದು ವಿಧಿವಶರಾಗಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಕಿಶೋರಿ ಬಲ್ಲಾಳ್ ಅವರನ್ನು ಜಯನಗರದ ಸೇವಾಕ್ಷೇತ್ರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕಿಶೋರಿ ಬಲ್ಲಾಳ್ ಅವರು 70ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದು, ಶಾರೂಖ್ ಖಾನ್ ಅಭಿನಯದ ಸ್ವದೇಶ್ ಚಿತ್ರದಲ್ಲೂ ನಟಿಸಿದ್ದರು. ಆದರೆ ಕೆಲವು ವರ್ಷಗಳಿಂದ ಚಿತ್ರರಂಗದಿಂದ ದೂರ ಉಳಿದು ವಿಶ್ರಾಂತಿಯನ್ನು ಪಡೆದುಕೊಳ್ಳುತ್ತಿದ್ದರು.