ಶಬರಿಮಲೆಗೆ ಮಹಿಳೆಯರ ಪ್ರವೇಶ ಖಂಡಿಸಿ ಮೂಡಿಗೆರೆ ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದ ವಿಶ್ವಹಿಂದೂ ಪರಿಷತ್ ಬಜರಂಗದಳ…

345
firstsuddi

ಮೂಡಿಗೆರೆ: ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನದ ಒಳಗೆ  40 ವರ್ಷದ  ಬಿಂದು ಮತ್ತು ಕನಕದುರ್ಗ ಎನ್ನುವ ಇಬ್ಬರು ಮಹಿಳೆಯರು ಪ್ರವೇಶಿದ್ದು,   ಈ ಬಗ್ಗೆ ವಿಶ್ವ ಹಿಂದೂ ಪರಿಷತ್ ಬಜರಂಗದಳದ ಕಾರ್ಯಕರ್ತರು ಇಬ್ಬರು ಮಹಿಳೆಯರಿಗೆ ಶಬರಿಮಲೆ ಅಯ್ಯಪ್ಪನ ದರ್ಶನಕ್ಕೆ ಪೊಲೀಸ್ ಬಂದೋಬಸ್ತ್ ಜೊತೆಗೆ ಅವಕಾಶ ಮಾಡಿಕೊಟ್ಟಿರುವುದು ಹಿಂದೂ ಧರ್ಮಕ್ಕೆ ಕಳಂಕ ತಂದಂತಾಗಿದೆ ಎಂದು ಖಂಡಿಸಿ  ತಹಸೀಲ್ದಾರ್ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ವಿಶ್ವ ಹಿಂದು ಪರಿಷತ್ ಮುಖಂಡರಾದ ಅವಿನಾಶ್, ವೆಂಕಟೇಶ್, ಅನಿಲ್, ಅಯ್ಯಪ್ಪನ ಭಕ್ತರಾದ ನರೇಂದ್ರಶೆಟ್ಟಿ, ಹಾಗೂ ಮಾಜಿ ಬಿಜೆಪಿ ತಾಲೂಕು ಅಧ್ಯಕ್ಷ ಸುದರ್ಶನ್ ಸೇರಿದಂತೆ ಇತರರು ಇದ್ದರು.

firstsuddi