ಬೆಂಗಳೂರು : ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಯುವ ನಾಯಕ ತೇಜಸ್ವಿ ಸೂರ್ಯ ಅವರು ನಾಮಪತ್ರ ಸಲ್ಲಿಕೆಗೆ ಮುನ್ನ ತೇಜಸ್ವಿನಿ ಅನಂತ್ ಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ತೇಜಸ್ವಿನಿ ಅನಂತ್ ಕುಮಾರ್ ಅವರು ಬಿಜೆಪಿ ಪಕ್ಷ ಕೈಗೊಂಡ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ. ನಾವು ಯಾವಾಗಲು ಪಕ್ಷದ ಸಿದ್ಧಾಂತದ ಜೊತೆಗಿರುತ್ತೇವೆ. ದೇಶ ಮೊದಲು ಎಂಬುವುದು ನಮ್ಮ ಪಕ್ಷದ ಸಿದ್ಧಾಂತ. ಸಣ್ಣ ಪುಟ್ಟ ಭಿನ್ನಾಭಿಪ್ರಾಯಗಳನ್ನು ಮರೆತು ತೇಜಸ್ವಿ ಸೂರ್ಯ ಪರ ಮತ ಪ್ರಚಾರದಲ್ಲಿ ತೊಡಗಿಕೊಳ್ಳೋಣ ಎಂದರು. ಬಳಿಕ ತೇಜಸ್ವಿ ಸೂರ್ಯ ಅವರು ತೇಜಸ್ವಿನಿಯವರ ಆಶೀರ್ವಾದ ಪಡೆದರು.










