ಟಿಪ್ಪು ಜಯಂತಿಯನ್ನು ಆಚರಣೆ ಮಾಡಲು ಮುಂದಾದರೆ ಉಗ್ರವಾಗಿ ಪ್ರತಿಭಟನೆ ನಡೆಸುತ್ತೇವೆ: ಆರ್ ಅಶೋಕ್…

344
firstsuddi

ಮೈಸೂರು: ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಾಸಕ ಆರ್ ಅಶೋಕ್ ಅವರು ಟಿಪ್ಪು ಜಯಂತಿಯನ್ನು ಆಚರಿಸಬಾರದು. ಹಿಂದುಗಳನ್ನು ಹತ್ಯೆ ಮಾಡಿದ್ದಾನೆ. ಹಿಂದುಗಳ ವಿರೋಧಿ ಟಿಪ್ಪು ಸುಲ್ತಾನ್ ಜಯಂತಿಯನ್ನು ಆಚರಿಸಬಾರದು. ಟಿಪ್ಪು ಜಯಂತಿಯನ್ನು ಬಿಟ್ಟು ಕಲಾಂ,ಶರೀಫರ, ಜಯಂತಿಯನ್ನು ಆಚರಣೆ ಮಾಡಿ. ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರ ಹೆಚ್ಚು ದಿನ ನಡೆಯಲ್ಲ. ವೋಟಿನಾ ರಾಜಕಾರಣಕ್ಕೆ ನೀವು ಟಿಪ್ಪು ಜಯಂತಿ ಆಚರಣೆ ಮಾಡುತ್ತಿದ್ದೀರಾ.ರಾಜ್ಯ ಸರ್ಕಾರ ಟಿಪ್ಪು ಜಯಂತಿಯನ್ನು ಆಚರಣೆ ಮಾಡಲು ಮುಂದಾದರೆ ಉಗ್ರವಾಗಿ ನವೆಂಬರ್ 9ರಂದು ಪ್ರತಿಭಟನೆ ನಡೆಸುತ್ತೇವೆ. ರಾಜ್ಯ ಸರ್ಕಾರಕ್ಕೆ ತಾಕತ್ ಇದ್ರೆ ಪ್ರತಿಭಟನೆಯನ್ನು ತಡೆಯಿರಿ ಎಂದು ಸವಾಲು ಹಾಕಿದ್ದಾರೆ.