ಬೆಂಗಳೂರು- ಆಪರೇಷನ್ ಕಮಲದ ಆರೋಪಕ್ಕೆ ಸಂಬಂಧಿಸಿದಂತೆ ಮಾತನಾಡಿದ ಬಿ.ಎಸ್ ಯಡಿಯೂರಪ್ಪ ಅವರು ಆಪರೇಷನ್ ಕಮಲದ ಅವಶ್ಯಕತೆ ನಮಗಿಲ್ಲ, ಡಿ.ಕೆ.ಶಿವಕುಮಾರ್ ಹಾಗೂ ದಿನೇಶ್ ಗುಂಡೂರಾವ್ ಅವರ ಆರೋಪದಲ್ಲಿ ಯಾವುದೇ ಹುರುಳಿಲ್ಲ, ಪ್ರಧಾನಿ ಮೋದಿ ಹಾಗೂ ಪಕ್ಷದ ಅಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿಯಾಗಿ, ಪ್ರಸಕ್ತ ರಾಜ್ಯ ರಾಜಕಾರಣ ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದೇನೆ. ಎಂದ ಅವರು ನಂತರ ಕರುಣಾನಿಧಿ ಅವರ ನಿಧನಕ್ಕೆ ಸಂಬಂಧಿಸಿದಂತೆ ಹಿರಿಯ ರಾಜಕಾರಣಿ ಹಾಗೂ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿಯವರ ನಿಧನ ಮನಸ್ಸಿಗೆ ನೋವು ತಂದಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಕುಟುಂಬ ಹಾಗೂ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ದೊರೆಯಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದರು.