ನವದೆಹಲಿ: ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಅವರು ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ನಾವು ಟಚ್ ಮಾಡಿಲ್ಲ. ಕಾಂಗ್ರೆಸ್ನ ಮೂರು ಶಾಸಕರು ಮುಂಬೈನಲ್ಲಿದ್ದು, ಅವರೆಲ್ಲರೂ ಬಿಜೆಪಿ ಸಂಪರ್ಕದಲ್ಲಿದ್ದಾರೆ ಎಂಬುದು ಸುಳ್ಳು. ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರೇ ನಮ್ಮ ಶಾಸಕರನ್ನು ಸಂಪರ್ಕಿಸಿದ್ದಾರೆ. ನಮ್ಮ ಶಾಸಕರಿಗೆ ಮಂತ್ರಿ ಸ್ಥಾನ ನೀಡುವುದಾಗಿ ಅವರೇ ಆಮಿಷ ಒಡ್ಡುತ್ತಿದ್ದಾರೆ ಎಂದಿದ್ದಾರೆ.










