ದೇವರ ಮೇಲೆ ಪ್ರಮಾಣ ಮಾಡಿ ಹೇಳ್ತೀನಿ ನಾವು ಆಪರೇಷನ್ ಕಮಲ ಮಾಡ್ತಿಲ್ಲ: ಶ್ರೀರಾಮುಲು…

275
firstsuddi

ಚಿತ್ರದುರ್ಗ: ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಶ್ರೀರಾಮುಲು ಅವರು ದೇವರ ಮೇಲೆ ಪ್ರಮಾಣ ಮಾಡಿ ಹೇಳ್ತೀನಿ ನಾವು ಆಪರೇಷನ್ ಕಮಲ ಮಾಡ್ತಿಲ್ಲ. ಕಾಂಗ್ರೆಸ್ ನವರು ಜೆಡಿಎಸ್ ಗೆ ಸಿಎಂ ಸ್ಥಾನ ಬಿಟ್ಟುಕೊಟ್ಟಿದ್ದು, ಇದರಿಂದ  ಕಾಂಗ್ರೆಸ್​ ಶಾಸಕರು ಅಸಮಾಧಾನಗೊಂಡಿದ್ದಾರೆ. ಇದನ್ನ ಪ್ಯಾಚಪ್ ಮಾಡಲು ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ. ಇಷ್ಟು ದಿನ ರಾಮುಲು, ಯಡಿಯೂರಪ್ಪ ಅವರು ಆಪರೇಷನ್ ಕಮಲ ಮಾಡುತ್ತಿದ್ದಾರೆ ಎಂದು ಆರೋಪಿಸುತ್ತಿದ್ದರು ಆದರೆ ಈಗ ನಮ್ಮ ಪಿಎಗಳು ಆಪರೇಷನ್ ಕಮಲ ಮಾಡುತ್ತಿದ್ದಾರೆ ಎಂದು ಆರೋಪಿಸುತ್ತಿದ್ದಾರೆ. ನಿಮ್ಮ ಶಾಸಕರನ್ನು ನೀವು ಗಟ್ಟಿಯಾಗಿ ಹಿಡಿದಿಟ್ಟುಕೊಳ್ಳು ಎಂದು ರಾಮುಲು ಅವರು ವಾಗ್ದಾಳಿ ನಡೆಸಿದ್ದಾರೆ