ಹಾಸನ: ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ಲೋಕಸಭಾ ಚುನಾವಣೆಯಲ್ಲಿಯೂ ಕಾಂಗ್ರೆಸ್ ಜೊತೆ ಮೈತ್ರಿ ಮುಂದುವರೆಯಲಿದೆ. ಆದರೆ ಎಷ್ಟು ಸೀಟು ಸಿಗುತ್ತದೆ ಎಂಬುದು ಗೊತ್ತಿಲ್ಲ. ಈ ಬಗ್ಗೆ ರಾಹುಲ್ ಗಾಂಧಿ, ವೇಣುಗೋಪಾಲ್, ಸಿದ್ದರಾಮಯ್ಯ ಜೊತೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು. ತಾವು ಚುನಾವಣೆಗೆ ಸ್ಪರ್ಧೆ ಮಾಡುವ ಬಗ್ಗೆ ಇನ್ನೂ ಕೂಡ ಯಾವುದೇ ತಿರ್ಮಾನ ಮಾಡಿಲ್ಲ ಎಂದಿದ್ದಾರೆ.










