ಹುಬ್ಬಳ್ಳಿ- ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಮಾತನಾಡಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಉತ್ತರ ಕರ್ನಾಟಕವನ್ನು ಸಂಪೂರ್ಣ ನಿರ್ಲಕ್ಷ್ಯ ಮಾಡುತ್ತಿದ್ದು, ರಾಜ್ಯದಲ್ಲಿ ಈಗಾಗಲೇ 13 ಜಿಲ್ಲೆಯಲ್ಲಿ ಬರಗಾಲದ ಭೀತಿ ಎದುರಾಗಿದ್ದು, ಇದರ ಬಗ್ಗೆ ಸರ್ಕಾರ ಯಾವುದೇ ಕ್ರಮವನ್ನು ಕೈಗೊಂಡಿಲ್ಲ. ನೂತನ ತಾಲೂಕಿಗಳಿಗೆ ತಹಶೀಲ್ದಾರ್ ನೇಮಿಸಿದ್ದಾರೆ ಅದನ್ನು ಬಿಟ್ಟು ಬೇರೆನೂ ಮಾಡಿಲ್ಲ. ರಾಜ್ಯ ಸರ್ಕಾರ ದಿವಾಳಿಯಾಗಿದೆ ಎಂದ ಅವರು ನಂತರ ನಗರ ಹಾಗೂ ಸ್ಥಳಿಯ ಸಂಸ್ಥೆ ಚುನಾವಣೆಯಲ್ಲಿ ನಾವು ಗೆಲ್ಲುವುದು ನಿಶ್ಚಿತ ಎಂದು ತಿಳಿಸಿದ್ದಾರೆ.