ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುವುದಿಲ್ಲ. ಕಾಂಗ್ರೆಸ್-ಜೆಡಿಎಸ್ ನಾಯಕರಿಗೆ ಆ ಭಯ ಬೇಡ ಎಂದು ಹೇಳಿಕೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ಹೇಳಿಕೆಯನ್ನು ಸ್ವಾಗತಿಸುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಟ್ವಿಟ್ ಮಾಡಿದ್ದಾರೆ.ಸಿದ್ದರಾಮಯ್ಯ ಅವರು ಟ್ವಿಟ್ ಮೂಲಕ ದೆಹಲಿಯಲ್ಲಿದ್ದ ಬಿಜೆಪಿ ಶಾಸಕರನ್ನು ಕರೆಸಿಕೊಂಡು ರಾಜ್ಯದ ಬರನಿರ್ವಹಣೆಯ ಸಮೀಕ್ಷೆಗೆ ಕಳುಹಿಸುವ ಬಿ.ಎಸ್.ಯಡಿಯೂರಪ್ಪ ಅವರ ನಿರ್ಧಾರವನ್ನು ಸ್ವಾಗತಿಸುತ್ತೇನೆ.ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವುದಿಲ್ಲ, ಪ್ರತಿಪಕ್ಷವಾಗಿ ಕೆಲಸ ನಿರ್ವಹಿಸುತ್ತೇವೆ. ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರಿಗೆ ಭಯ ಬೇಡ’ ಎಂದಿರುವ ಬಿ.ಎಸ್.ಯಡಿಯೂರಪ್ಪ ಅವರು ನುಡಿದಂತೆ ನಡೆಯಲಿ, ರಾಜ್ಯದ ಜನರ ನಂಬಿಕೆ ಉಳಿಸಿಕೊಳ್ಳಲಿ ಎಂದು ತಿಳಿಸಿದ್ದಾರೆ.