ಕಲಬುರಗಿ: ಸುದ್ದಿಗಾರರೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು ಯಾರು ಪಕ್ಷವನ್ನು ಬಿಟ್ಟು ಹೋಗುವುದಿಲ್ಲ. ರಮೇಶ್ ಜಾರಕಿಹೊಳಿ ಅವರು ಮೊದಲಿನಿಂದಲೂ ಕಾಂಗ್ರೆಸ್ ನಲ್ಲಿ ಇದ್ದವರು. ಅವರು ಪಕ್ಷದಲ್ಲಿ ಇದ್ದು ಕೆಲಸ ಮಾಡುತ್ತಾರೆ ಎಂಬ ವಿಶ್ವಾಸವಿದೆ. ಸ್ವಲ್ಪ ದಿನ ಸಿಟ್ಟು ಇರುವುದು ಸಹಜ. ಭಿನ್ನಮತ ಶಮನಗೊಳಿಸಲು ಸ್ವಲ್ಪ ಸಮಯ ಹಿಡಿಯುತ್ತದೆ. ರಮೇಶ್ ಜಾರಕಿಹೊಳಿ ಅವರ ರಾಜೀನಾಮೆ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದಿದ್ದಾರೆ.










