ಮೂಡಿಗೆರೆ:ಲೋಕಸಭಾ ಚುನಾವಣೆಗೆ ಕ್ಷಣಗಣನೆ ಪ್ರಾರಂಭವಾಗಿದ್ದು ಒಂದು ಕಡೆ ಮಹಾಘಟ್‍ಬಂಧನ್ ಮತ್ತೊಂದು ಕಡೆ ಮೋದಿ ವರ್ಚಸ್ಸು ಚುನಾವಣೆಯಲ್ಲಿ ತೀವ್ರ ಪೈಪೋಟಿ ನೀಡಲು ಸಜ್ಜಾಗಿದೆ. ಈ ಬಾರಿಯ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಚುನಾವಣಾ ಕಣ ಗರಿಗೆದರೀದು ಯಾವ ಪಕ್ಷದಲ್ಲಿ ಯಾರಿಗೆ ಟಿಕೇಟ್ ಸಿಗಬಹುದು ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ. ಕಳೆದ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಶೋಭಾ ಕರಂದ್ಲಾಜೆ ಆಗ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಜಯಪ್ರಕಾಶ್ ಹೆಗ್ಗಡೆ ವಿರುದ್ದ ಸ್ಪರ್ದಿಸಿ 1 ಲಕ್ಷ 80 ಮತಗಳ ಅಂತರದಿಂದ ಗೆದ್ದು ಸಂಸದರಾಗಿದ್ದರು. ಈ ಬಾರಿ ಶೋಭಾ ಕರಂದ್ಲಾಜೆ ಹಾಸನದಿಂದ ಸ್ಪರ್ದಿಸಲಿದ್ದಾರೆ ಎನ್ನಲಾಗಿದ್ದು ಈ ಬಾರಿ ಚಿಕ್ಕಮಗಳೂರು ಉಡುಪಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೇಟ್ ಯಾರಿಗೆ ಎನ್ನುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಪ್ರತಿಸ್ಪರ್ದಿಯಾಗಿದ್ದ ಕಾಂಗ್ರೆಸ್‍ನ ಜಯಪ್ರಕಾಶ್ ಹೆಗ್ಡೆ ಈ ಬಾರಿ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದು ಅವರು ಸಹ ಬಿಜೆಪಿ ಟಿಕೇಟ್ ಆಕಾಂಕ್ಷಿಯಾಗಿದ್ದು ಕುತೂಹಲಕ್ಕೆ ಕಾರಣವಾಗಿದೆ.ರಾಜಕೀಯ ವಿಶ್ಲೇಷಕರ ಪ್ರಕಾರ ಶೋಭಾ ಕರಂದ್ಲಾಜೆ ಹಾಸನ ಕ್ಷೇತ್ರದಿಂದ ಸ್ಪರ್ದಿಸಲಾಗುತ್ತದೆ ಎನ್ನಲಾಗುತ್ತಿದ್ದು, ಕಾಂಗ್ರೆಸ್‍ನಿಂದ ವಲಸೆ ಬಂದ ಜಯಪ್ರಕಾಶ್ ಹೆಗ್ಗಡೆ ಅವರಿಗೆ ಟಿಕೇಟ್ ಕೈ ತಪ್ಪುವ ಸಾಧ್ಯತೆ ಇದ್ದು ಮೂಲ ಬಿಜೆಪಿಗರಿಗೆ ಮಣೆ ಹಾಕುವ ಸಾಧ್ಯತೆಗಳು ಹೆಚ್ಚಿವೆ. 
ಪ್ರಸ್ತುತ ಪಶ್ಚಿಮ ಮತ್ತು ಪೂರ್ವ ಕರಾವಳಿಯ 13 ರಾಜ್ಯದ ಮೀನುಗಾರರನ್ನು ಒಳಗೊಂಡ ಅಖಿಲ ಭಾರತ ಮೀನುಗಾರರ ವೇದಿಕೆಯ ಪ್ರಧಾನ ಕಾರ್ಯದರ್ಶಿ ಮತ್ತು ಉಡುಪಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿರುವ ಯಶ್‍ಪಾಲ್ ಸುವರ್ಣ ಉಡುಪಿ ಚಿಕ್ಕಮಗಳೂರು ಲೋಕಸಭಾ ಚುನಾವಣಾ ಟಿಕೇಟ್ ಆಕಾಂಕ್ಷಿಯಾಗಿದ್ದಾರೆ. ಪ್ರಸ್ತುತ ರಾಜ್ಯ ಬಿಜೆಪಿ ಸಹಕಾರಿ ಹಾಗೂ ಮೀನುಗಾರಿಕಾ ಪ್ರಕೋಷ್ಟದ ಸದಸ್ಯರೂ ಆಗರುವ ಯಶ್‍ಪಾಲ್ ಸುವರ್ಣ ರಾಜಕೀಯ ನಾಯಕರಾಗಿ, ಹಿಂದೂ ಸಂಘಟನೆಯ ಸಕ್ರಿಯ ನಾಯಕರಾಗಿ, ಸಹಕಾರಿ ಕ್ಷೇತ್ರದ ನಾಯಕರಾಗಿ, ಮೀನುಗಾರ ಮುಖಂಡರಾಗಿ ಸೇವೆ ಸಲ್ಲಿಸಿದ್ದಾರೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಸಾಮಾಜಿಕ, ಶೈಕ್ಷಣಿಕ, ಕ್ರೀಡಾ ಚಟುವಟಿಕೆಗಳಿಗೆ ಪ್ರೋತ್ಸಾಹ ಸಹಕಾರವನ್ನು ನೀಡುತ್ತಾ ಬಂದಿರುವ ಓರ್ವ ಸಹೃದಯ ದಾನಿಯಾಗಿ ಗುರುತಿಸಿಕೊಂಡಿದ್ದಾರೆ. ಅಖಿಲಭಾರತ ಮೀನುಗಾರರ ವೇದಿಕೆಯ ಮೂಲಕ ತೆರಳಿದ್ದ ಮೀನುಗಾರರ ನಿಯೋಗದ ನೇತೃತ್ವ ವಹಿಸಿ ಪ್ರಧಾನ ಮಂತ್ರಿಗಳಾದ ನರೇಂದ್ರಮೋದಿಯವರನ್ನು ಬೇಟಿಯಾಗಿ ಮೀನುಗಾರರ ಸಮಸ್ಯೆಗಳ ಬಗ್ಗೆ ಚರ್ಚಿಸಿದ್ದರು.
2018ರಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಅಮಿತ್ ಶಾ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ಕರಾವಳಿ ಜಿಲ್ಲೆಗಳ ಮೀನುಗಾರರ ಬೃಹತ್ ಸಮಾವೇಶದ ಸಂಚಾಲಕರಾಗಿ ಯಶಸ್ವಿ ಸಮಾವೇಶದ ಆಯೋಜನೆ ಮಾಡಿದ್ದರು.ಈ ಬಾರಿಯ ಉಡುಪಿ ಚಿಕ್ಕಮಗಳೂರು ಲೋಕಸಭಾ ಚುನಾವಣೆಯ ಬಿಜೆಪಿ ಟಿಕೇಟ್ ಆಕಾಂಕ್ಷಿಗಳಲ್ಲಿ ಯಶ್‍ಪಾಲ್ ಸುವರ್ಣ, ಜಯಪ್ರಕಾಶ್ ಹೆಗ್ಗಡೆ ಅವರ ಹೆಸರು ಮುಂಚೂಣಿಯಲ್ಲಿದ್ದು ಲೋಕಸಭಾ ಚುನಾವಣಾ ಕಣ ಕುತೂಹಲ ಮೂಡಿಸಿದೆ.










