ಮೂಡಿಗೆರೆ: ಪಾಕ್ ವಶದಲ್ಲಿದ್ದ ವಿಂಗ್ ಕಮಾಂಡರ್ ಅಭಿನಂದನ್ ಅವರು ಇಂದು ಬಿಡುಗಡೆಯಾದ ಹಿನ್ನೆಲೆಯಲ್ಲಿ ಹಿಂದೂಪರ ಸಂಘಟನೆ ಹಾಗೂ ಬಿಜೆಪಿ ವತಿಯಿಂದ ಮೂಡಿಗೆರೆ ಲಯನ್ಸ್ ವೃತ್ತದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು.ಈ ಸಂದರ್ಭದಲ್ಲಿ ಬಿಜೆಪಿ ತಾಲ್ಲೂಕು ಅಧ್ಯಕ್ಷ ದುಂಡುಗ ಪ್ರಮೋದ್,ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಕೆ.ಸಿ ರತನ್,ಕಣಚೂರು ವಿನೋದ್,ಬಜರಂಗದಳ ತಾಲ್ಲೂಕು ಸಂಚಾಲಕ ಅವಿನಾಶ್, ದಿನೇಶ್ ಘಟ್ಟದಹಳ್ಳಿ, ತರುವೆ ಆದರ್ಶ್, ಪ್ರವೀಣ್ ಪೂಜಾರಿ, ಸಂದರ್ಶ, ಅನಿಲ್ ಸೇರಿದಂತೆ ಇತರರು ಇದ್ದರು.