ತಿರುವನಂತಪುರಂ : ಮಕ್ಕಳ ಚಿಕಿತ್ಸೆಗಾಗಿ ತಾಯಿಯೊಬ್ಬರು ತಮ್ಮ ಅಂಗಾಂಗಳನ್ನು ಮಾರಾಟ ಮಾಡಲು ಮುಂದಾಗಿರುವ ಮನಕಲುಕುವ ಘಟನೆ ಕೇರಳದ ಕೊಚ್ಚಿಯಲ್ಲಿ ನಡೆದಿದೆ. 44 ವರ್ಷದ ಶಾಂತಿ ಎಂಬುವವರಿಗೆ 5 ಮಕ್ಕಳಿದ್ದು, ಮೂವರು ಮಕ್ಕಳು ಅನಾರೋಗ್ಯದಿಂದ ಬಳಲುತ್ತಿದ್ದಾರೆ. 25 ವರ್ಷದ ತಮ್ಮ ಹಿರಿಯ ಮಗ ಮೆದುಳು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರೆ. 23 ವರ್ಷದ ಮತ್ತೊಬ್ಬ ಮಗ ಹೊಟ್ಟೆಯಲ್ಲಿ ಟ್ಯೂಮರ್ ಆಗಿ ಆಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದಾರೆ. ಹಾಗೂ ತಮ್ಮ 11 ವರ್ಷದ ಮಗಳು ಇತ್ತೀಚೆಗೆ ಅಪಘಾತದಲ್ಲಿ ಗಾಯಗೊಂಡಿದ್ದು, ಅವರಿಗೆ ನರ ಶಸ್ತ್ರಚಿಕಿತ್ಸೆ ಆಗಬೇಕಿದೆ. ಈಗಾಗಲೇ ಮಕ್ಕಳ ಚಿಕಿತ್ಸೆಗೆ 20 ಲಕ್ಷ ರೂ ಹಣವನ್ನು ಖರ್ಚು ಮಾಡಿದ್ದು, ಆದರೆ ಮಕ್ಕಳ ಆರೋಗ್ಯ ಮತ್ತಷ್ಟು ಗಂಭೀರವಾಗಿದೆ.
ವಾಹನ ಚಾಲನೆ ಹೇಳಿಕೊಡುತ್ತಿದ್ದ ಶಾಂತಿ ಅವರು ಮಹಾಮಾರಿ ಕೊರೊನಾ ಸೋಂಕಿನಿಂದ ಉದ್ಯೋಗ ಕಳೆದುಕೊಂಡಿದ್ದು, ಚಿತ್ರಮಂದಿರದಲ್ಲಿ ಕೆಲಸ ಮಾಡುತ್ತಿದ್ದ ತಮ್ಮ 21 ವರ್ಷದ ಮಗನಿಗೂ ಕೂಡಾ ಕೊರೊನಾ ಕಾರಣದಿಂದ ಕೆಲಸ ಇಲ್ಲದಂತಾಗಿದೆ. ಇದರಿಂದ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದ ತಾಯಿ ಮಕ್ಕಳ ಚಿಕಿತ್ಸೆಗಾಗಿ ಹಣ ಹೊಂದಿಸುವ ಸಲುವಾಗಿ ಇಂತಹ ನಿರ್ಧಾರ ತೆಗೆದುಕೊಂಡಿದ್ದಾರೆ.
ಈ ವಿಷಯ ತಿಳಿಯುತ್ತಿದ್ದಂತೆ ಕೇರಳದ ಆರೋಗ್ಯ ಸಚಿವೆ ಕೆ.ಕೆ. ಶೈಲಜಾ ಅವರು ಮಕ್ಕಳ ಚಿಕಿತ್ಸಾ ವೆಚ್ಚವನ್ನು ತಾವೇ ಭರಿಸುವುದಾಗಿ ಭರವಸೆ ನೀಡಿದ್ದಾರೆ










