ಬೆಂಗಳೂರು- ಇಂದು ನಡೆದ ರಾಜ್ಯಪಾಲರ ವಂದನಾ ನಿರ್ಣಯದ ಮೇಲೆ ನಡೆದ ಚರ್ಚೆಯಲ್ಲಿ ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಅವರು ಮಾತನಾಡಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ದ್ರೋಹ ಮಾಡುವುದು ರಕ್ತಗತವಾಗಿ ಬಂದಿದೆ.ಕುಮಾರಸ್ವಾಮಿಯವರು ಅಂದು ಮಾಜಿ ಮುಖ್ಯಮಂತ್ರಿ ಧರಂಸಿಂಗ್ ಅವರ ಬೆನ್ನಿಗೆ ಚೂರಿ ಹಾಕಿ ದ್ರೋಹ ಮಾಡಿದ್ದು. ಕಾಂಗ್ರೆಸ್ ಗೆ ಕೈ ಕೊಟ್ಟು ಬಿ.ಜೆ.ಪಿ ಜೊತೆ ಮೈತ್ರಿ ಮಾಡಿಕೊಂಡು ಮುಖ್ಯಮಂತ್ರಿಯಾದವರು ನೀವು ಎಂದು ಸಭೆಯಲ್ಲಿ ಕಿಡಿಕಾರಿದ್ದಾರೆ..