ಉಡುಪಿ: ಯಕ್ಷಗಾನ ರಂಗಸ್ಥಳದಲ್ಲಿಯೇ ಯಕ್ಷಗಾನ ಕಲಾವಿದ ಮೃತಪಟ್ಟಿರುವ ಘಟನೆ ಜಿಲ್ಲೆಯ ಬೈಂದೂರು ತಾಲೂಕಿನ ಜೋಗಿಬೆಟ್ಟು ಗ್ರಾಮದಲ್ಲಿ ನಡೆದಿದೆ. ಹುಡುಗೋಡು ಚಂದ್ರಹಾಸ ಮೃತ ಯಕ್ಷಗಾನ ಕಲಾವಿದ. ಭೀಷ್ಮ ವಿಜಯ ಪ್ರಸಂಗದಲ್ಲಿ ಸಾಲ್ವನ ಪಾತ್ರ ನಿರ್ವಹಿಸಿದ ಹುಡುಗೋಡು ಚಂದ್ರಹಾಸ ಅವರು ಭೀಷ್ಮ ಎನ್ನುವ ಉದ್ಘಾರ ತೆಗೆಯುತ್ತಲೆ ವೇದಿಕೆಯಲ್ಲೇ ಹೃದಯಾಘಾತವಾಗಿ ಕುಸಿದು ಬಿದ್ದಿದ್ದಾರೆ.ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲು ಮುಂದಾಗಿದ್ದು, ಅಷ್ಟರಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.










