ಬೆಂಗಳೂರು: ನಟಿ ರಾಧಿಕಾ ಪಂಡಿತ್ ಅವರು ನಿನ್ನೆ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಪತ್ನಿಯ ಹುಟ್ಟುಹಬ್ಬಕ್ಕೆ ಯಶ್ ಅವರು ಶುಭಾಶಯ ಕೋರಿದ್ದಾರೆ. ನಾನು ಜೀವನದಲ್ಲಿ ಏನನ್ನು ಹೊಂದಿದ್ದೇನೆ ಎಂಬ ಕಾರಣಕ್ಕಿಂತ ನನ್ನ ಬದುಕಿನಲ್ಲಿ ನನ್ನ ಜೊತೆ ಯಾರಿದ್ದಾರೆ ಎಂಬುದರಿಂದ ನನ್ನ ಬದುಕು ಸುಂದರವಾಗಿದೆ. ನಿನಗೆ ಧನ್ಯವಾದ. ನೀನು ನನಗಾಗಿಯೇ ಜನಿಸಿದಂತೆ ನನಗೆ ಭಾಸವಾಗುತ್ತದೆ. ಹ್ಯಾಪಿ ಬರ್ತ್ ಡೇ ಮೈ ಲವ್ ಎಂದು ಟ್ವೀಟ್ ಮಾಡಿದ್ದಾರೆ.











