ಹುಬ್ಬಳ್ಳಿ: ಇಂದು ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಹಾಗೂ ಬಿ.ಎಸ್ ಯಡಿಯೂರಪ್ಪನವರು ಆಕಸ್ಮಿಕವಾಗಿ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಭೇಟಿಯಾಗಿದ್ದಾರೆ. ಇದಕ್ಕೆ ಸಂಬಂಧಿದಂತೆ ಸಿದ್ದರಾಮಯ್ಯ ಅವರು ಟ್ವಿಟ್ ಮಾಡಿದ್ದು, ರಾಜಕೀಯ ಜೀವನದ ಹೊರತಾಗಿ ಯಡಿಯೂರಪ್ಪನವರು ಮತ್ತು ನಾನು ಒಳ್ಳೆಯ ಗೆಳೆಯರು. ಇಲ್ಲಿ ಅಧಿಕಾರ, ಅಂತಸ್ತು ಯಾವುದೂ ಶಾಶ್ವತವಲ್ಲ, ಕೊನೆಗೊಂದು ದಿನ ಗೆಲ್ಲುವುದು ನಮ್ಮ ನಡುವಿನ ಮಾನವೀಯ ಸಂಬಂಧಗಳು ಮಾತ್ರ. ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಆಕಸ್ಮಿಕವಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಭೇಟಿಯಾದ ಕ್ಷಣ ಎಂದು ಟ್ವಿಟ್ ಮಾಡಿದ್ದಾರೆ.











