ಬೆಂಗಳೂರು: ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಗೆಂದು ದೆಹಲಿಗೆ ತೆರಳಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು ತುರ್ತಾಗಿ ಬೆಂಗಳೂರಿಗೆ ವಾಪಸ್ಸಾಗಿರುವುದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಎಂದು ಹೆಚ್.ಡಿ.ಕುಮಾರಸ್ವಾಮಿಯವರು ವ್ಯಂಗ್ಯವಾಡಿದ್ದಾರೆ. ರಾಜಕಾರಣ ಯಾವ ದಿಕ್ಕಿನಲ್ಲಿ ಸಾಗುತ್ತಿದೆ ಎಂಬುದು ನಿಮಗೇ ಗೊತ್ತಿದೆ. ಮೈತ್ರಿ ಸರ್ಕಾರ ಅಸ್ಥಿರಗೊಳಿಸಲು ನಿರಂತರವಾಗಿ ಪ್ರಯತ್ನಗಳು ನಡೆಯುತ್ತಲೇ ಇವೆ ಸಮ್ಮಿಶ್ರ ಸರಕಾರವನ್ನು ಬೀಳಿಸುವ ಪ್ರಯತ್ನ ನಡೆಯುತ್ತಲೇ ಇವೆ ಎಂದಿದ್ದಾರೆ.










