ತುಮಕೂರು : ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಕಾಂಗ್ರೆಸ್ ಮಾಜಿ ಶಾಸಕ ಕೆ.ಎನ್. ರಾಜಣ್ಣ ಅವರು ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಡಾ. ಜಿ. ಪರಮೇಶ್ವರ್‍ಗೆ ಸ್ವಯಂ ನಾನು ಸಹಕಾರ ನೀಡಿದ್ದೆ. ನನ್ನ ಸಹಕಾರದಿಂದ ಗೆದ್ದು ಬಂದಿದ್ದಾರೆ. ಅವರಿಗೆ ಉಪಕಾರ ಸ್ಮರಣೆ ಇಲ್ಲ. ಮೈತ್ರಿ ಪಕ್ಷದ ಸೋಲಿಗೆ ಝೀರೋ ಟ್ರಾಫಿಕ್ ಕಾರಣ ಎಂದು ಡಾ.ಜಿ. ಪರಮೇಶ್ವರ್ ಅವರನ್ನು ಕುರಿತು ಹೇಳಿದ್ದು, ಇನ್ನೂ ಒಂದು ವಾರದಲ್ಲಿ ಝೀರೋ ಟ್ರಾಫಿಕ್ ಕೆಳಗೆ ಇಳಿಯಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕರಿಸುವವರೆಗೂ ಮೈತ್ರಿ ಸರ್ಕಾರ ಇರುತ್ತದೆ. ಬಳಿಕ ಸರ್ಕಾರ ಉರುಳಲಿದೆ. ತುಮಕೂರು ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿದ್ದು, ಬಿಜೆಪಿ ಕೆಲವು ಕ್ಷೇತ್ರಕ್ಕೆ ಮಾತ್ರ ಸೀಮಿತವಾಗಿತ್ತು. ಬಸವರಾಜು ಅವರು 20 ವರ್ಷ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ಹೀಗಾಗಿ ಅವರಿಗೆ ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್ ನಾಯಕರ ಸಂಪರ್ಕವಿದೆ. ಕಾಂಗ್ರೆಸ್ ನಾಯಕರ ಸಹಕಾರದಿಂದ ಬಸವರಾಜು ಅವರು ಗೆದ್ದಿದ್ದಾರೆ ಎಂದು ಹೇಳಿದ್ದಾರೆ.










