ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳಕ್ಕೆ ಭರವಸೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್.

34

ಬೆಂಗಳೂರು: ರಾಜ್ಯದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವಧನ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ ನೀಡಿದ್ದಾರೆ. ವಿಧಾನಸೌಧದ ತಮ್ಮ ಕೊಠಡಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಬೇಡಿಕೆ ಹಾಗೂ ಕುಂದುಕೊರತೆಗಳ ಕುರಿತು ಸಚಿವರು ಚರ್ಚೆ ನಡೆಸಲಾಗಿದೆ. ಗೌರವಧನ ಏರಿಕೆ, ಗ್ರಾಚ್ಯುಟಿ ಸೌಲಭ್ಯ, ಉಚಿತ ವೈದ್ಯಕೀಯ ಸೌಲಭ್ಯ, ಮುಂಬಡ್ತಿ ಹಾಗೂ ಅನಾರೋಗ್ಯ ಪೀಡಿತರಿಗೆ ಸ್ವಯಂ ನಿವೃತ್ತಿ ಯೋಜನೆ ಸೇರಿದಂತೆ ಹಲವು ವಿಷಯಗಳ ಕುರಿತು ಸಚಿವರು, ವಿವಿಧ ಸಂಘಟನೆಗಳೊಂದಿಗೆ ಚರ್ಚಿಸಲಾಗಿದೆ. ಈ ವೇಳೆ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ನಾನು ಎಂದಿಗೂ ಅಂಗನವಾಡಿ ಕಾರ್ಯಕರ್ತೆಯರ ಪರವಾಗಿದ್ದೇನೆ. ಇಡೀ ದೇಶಕ್ಕೆ ನಮ್ಮ ಅಂಗನವಾಡಿಗಳು ಮಾದರಿಯಾಗಿವೆ. ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ನಡೆಸಿ, ಮುಂದಿನ ಬಜೆಟ್‍ನಲ್ಲಿ ಗೌರವಧನ ಏರಿಕೆ ಮಾಡಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.