ಅಂಗಾಂಗ ದಾನ ಮಾಡಿ ಪುತ್ರನ ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು…

179
firstsuddi

ಮೂಡಿಗೆರೆ : ಪುತ್ರನ ಸಾವಿನ ನೋವಿನಲ್ಲೂ ಪೋಷಕರು ಆತನ ಅಂಗಾಂಗಗಳನ್ನು ದಾನ ಮಾಡಿ ಸಾರ್ಥಕತೆ ಮೆರೆದಿರುವ ಘಟನೆ ತಾಲೂಕಿನಲ್ಲಿ ನಡೆದಿದೆ.

ತಾಲೂಕಿನ ಹೊರಟ್ಟಿ ಗ್ರಾಮದ ಧನ್ಯಕುಮಾರ್(37) ಎಂಬುವರು ಬೈಕ್ ನಲ್ಲಿ ಹೋಗುತ್ತಿದ್ದಾಗ ಸಬ್ಬೇನಹಳ್ಳಿ ಬಳಿ ಕ್ಯಾಂಟರ್ ಡಿಕ್ಕಿ ಹೊಡೆದಿದೆ. ತಲೆಗೆ ಗಂಭೀರವಾಗಿ ಏಟು ಬಿದ್ದ ಹಿನ್ನೆಲೆ ಧನ್ಯಕುಮಾರ್ ಅವರ ಮೆದುಳು ನಿಷ್ಕ್ರಿಯಗೊಂಡಿದೆ. ಎಷ್ಟೇ ಪ್ರಯತ್ನಪಟ್ಟರೂ ಅವರನ್ನು ಬದುಕಿಸಲು ಸಾಧ್ಯವಾಗಲಿಲ್ಲ.

ಸದ್ಯ ಧನ್ಯಕುಮಾರ್ ಅವರ ಇತರೆ ಅಂಗಾಂಗಗಳು ಸುರಕ್ಷಿತವಾಗಿರುವ ಹಿನ್ನೆಲೆ ವೈದ್ಯರ ಸಲಹೆ ಮೇರೆಗೆ ಅಂಗಾಂಗ ದಾನಕ್ಕೆ ಕುಟುಂಬಸ್ಥರು ಮುಂದಾಗಿದ್ದು, ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಅಂಗಾಂಗ ದಾನ ಪ್ರಕ್ರಿಯೆ ನಡೆಯುತ್ತಿದೆ. ಧನ್ಯಕುಮಾರ್ ಅವರು 4 ವರ್ಷದ ಮಗಳು, ಪತ್ನಿ ಹಾಗೂ ತಂದೆ-ತಾಯಿಯನ್ನ ಅಗಲಿದ್ದಾರೆ.