ಅಂತರಾಷ್ಟ್ರೀಯ ಮಹಿಳಾ ದಿನ : ಶುಭಕೋರಿದ ಪ್ರಧಾನಿ ನರೇಂದ್ರ ಮೋದಿ.

95
Firstsuddi

ನವದೆಹಲಿ : ಇಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಟ್ವೀಟ್ ಮೂಲಕ ದೇಶದ ಮಹಿಳೆಯರಿಗೆ ಶುಭಾಶಯ ಕೋರಿದ್ದಾರೆ.

ನಮ್ಮ ದೇಶದ ಮಹಿಳೆಯರು ಅನೇಕ ಸಾಧನೆಗಳನ್ನು ಮಾಡಿದ್ದು, ಭಾರತ ಹೆಮ್ಮೆ ಪಡುವಂತೆ ಮಾಡಿದ್ದಾರೆ. ಹಲವು ಕ್ಷೇತ್ರಗಳಲ್ಲಿ ಮಹಿಳಾ ಸಬಲೀಕರಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ನಾವು ಕೆಲಸ ಮಾಡುವ ಅವಕಾಶವನ್ನು ಪಡೆಯುತ್ತಿರುವುದು ನಮ್ಮ ಸರ್ಕಾರದ ಗೌರವ ಎಂದು  ಟ್ವೀಟ್ ಮಾಡಿದ್ದಾರೆ.