ಅಕ್ಕಿ ಕೇಳಿದ್ದಕ್ಕೆ ಸತ್ತು ಹೋಗಿ ಎಂದ ಸಚಿವ ಉಮೇಶ್ ಕತ್ತಿ..!

118
firstsuddi

ಬೆಳಗಾವಿ : ಗದಗ ಜಿಲ್ಲೆಯ ಕುರ್ತಕೋಟೆ ಗ್ರಾಮದ ರೈತ ಸಂಘದ ಕಾರ್ಯಕರ್ತ ಈಶ್ವರ ಆರ್ಯರ ಅವರು ಆಹಾರ ಸಚಿವ ಉಮೇಶ್ ಕತ್ತಿಯವರಿಗೆ ಕರೆ ಮಾಡಿ ಪಡಿತರ ಅಕ್ಕಿ ಕಡಿತಗೊಳಿಸಿರುವುನ್ನು ಪ್ರಶ್ನಿಸಿದ್ದಾರೆ. ಈ ವೇಳೆ ಉತ್ತರಿಸಿದ ಉಮೇಶ್ ಕತ್ತಿಯವರು ಉತ್ತರ ಕರ್ನಾಟಕದಲ್ಲಿ ಅಕ್ಕಿ ಜೊತೆಗೆ ಜೋಳ ಕೊಡ್ತೀವಿ. ಲಾಕ್ ಡೌನ್ ಸಂದರ್ಭದಲ್ಲಿ 5 ಕೆಜಿ ಅಕ್ಕಿ ಕೇಂದ್ರ ಸರ್ಕಾರ ಕೊಡುತ್ತೆ. ಮುಂದಿನ ತಿಂಗಳಿನಿಂದ ಅಕ್ಕಿ ಕೊಡಲಾಗುವುದು ಎಂದಿದ್ದಾರೆ.

ಈಶ್ವರ ಅವರು ಮಾತು ಮುಂದುವರೆಸಿ ಲಾಕ್ ಡೌನ್ ಇದೆ ಅಲ್ಲಿಯವರೆಗೆ ಉಪವಾಸ ಸಾಯೋದಾ ಎಂದು ಪ್ರಶ್ನೆ ಹಾಕಿದ್ದಾರೆ. ಆಗ ಸಚಿವರು, ಸಾಯೋದು ಒಳ್ಳೆಯದು, ಅದಕ್ಕಿಂತ ಮೊದಲು ಅಕ್ಕಿ ಮಾರಾಟ ಮಾಡೋ ದಂಧೆ ನಿಲ್ಲಿಸಿ ಎಂದು ಉಡಾಫೆಯ ಮಾತುಗಳನ್ನಾಡಿ ಫೋನ್ ಮಾಡಬೇಡಿ ಎಂದು ಹೇಳಿ ಕಾಲ್ ಕಟ್ ಮಾಡಿದ್ದಾರೆ. ಸದ್ಯ ಉಮೇಶ್ ಕತ್ತಿಯವರ ಈ ಆಡಿಯೋ ಈಗ ವೈರಲ್ ಆಗಿದೆ.

ಇನ್ನೂ ಈ ಬಗ್ಗೆ ಸಮರ್ಥಿಸಿಕೊಂಡಿರುವ ಆಹಾರ ಸಚಿವ ಉಮೇಶ್ ಕತ್ತಿಯವರು ಯೋಜನೆ ಏನು ಇದೆಯೋ ಅದನ್ನೇ ಹೇಳಿದ್ದೇನೆ. ಆರೂವರೆ ಕೋಟಿ ಜನರಿಗೆ ಉತ್ತರ ಕೊಡುತ್ತಾ ಎಲ್ಲಿ ಹೋಗಲಿ ನಾನು? ಸತ್ತು ಹೋಗ್ಲಾ ಅಂತ ಕೇಳಿದ್ರೆ ನಾನೇನು ಉತ್ತರಿಸಲಿ ಹೇಳಿ?ಸಾಯೋದು ಬೇಡ ಎಂದು ಹೇಳುವಷ್ಟು ದೊಡ್ಡ ಮನಸ್ಸು ನನಗಿಲ್ಲ. ಲಾಕ್ ಡೌನ್ ಪರಿಸ್ಥಿತಿಯಲ್ಲಿ ಕೇಂದ್ರ ಸರ್ಕಾರ ಮೇ ಹಾಗೂ ಜೂನ್ ತಿಂಗಳಲ್ಲಿ ಐದು ಕೆಜಿ ಅಕ್ಕಿ ಪಡಿತರ ವಿತರಣೆ ಮಾಡುತ್ತೆ ಎಂದು ತಿಳಿಸಿದ್ದಾರೆ.