ಮೈಸೂರು: ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಮರಳುಕಟ್ಟೆಯಲ್ಲಿ ಅಕ್ರಮ ಸಂಪರ್ಕದ ವಿದ್ಯುತ್ ಸ್ಪರ್ಶಿಸಿ ಕಾಡಾನೆಯೊಂದು ಮೃತಪಟ್ಟ ಘಟನೆ ನಿನ್ನೆ ನಡೆದಿದೆ.
ಕುಗ್ರಾಮದ ಬುಡಕಟ್ಟು ನಿವಾಸಿ ಮಣಿ ಎಂಬುವವರ ಒಡೆತನದ ಸರ್ವೆ ನಂಬರ್ 2ರ ಜಮೀನಿನಲ್ಲಿ ಆನೆ ವಿದ್ಯುತ್ ಸ್ಪರ್ಶಿಸಿದೆ. ಬೆಳಗ್ಗೆ 7 ಗಂಟೆ ಸುಮಾರಿಗೆ ಆನೆ ಶವವಾಗಿ ಪತ್ತೆಯಾಗಿದೆ. ವಿಚಾರ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಅರಣ್ಯ ಹಾಗೂ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.
ಮರಣೋತ್ತರ ಪರೀಕ್ಷೆ ನಡೆಸಿದ ಪಶುವೈದ್ಯ, ವಿದ್ಯುತ್ ಸ್ಪರ್ಶದಿಂದ ಸಾವು ಸಂಭವಿಸಿದೆ ಎಂದು ಖಚಿತಪಡಿಸಿದ್ದಾರೆ. ಮಣಿ ವಿರುದ್ಧ ಅರಣ್ಯ ಇಲಾಖೆ, ಪೊಲೀಸರಿಗೆ ದೂರು ನೀಡಿದೆ.










