ಅಕ್ರಮ ಹಣ ವರ್ಗಾವಣೆ ಕೇಸ್ ; ಸಚಿವ ಸತ್ಯೇಂದರ್ ಜೈನ್ ನಿವಾಸದ ಮೇಲೆ ಇಡಿ ದಾಳಿ…

57
firstsuddi

ನವದೆಹಲಿ : ಅಕ್ರಮ ಹಣ ವರ್ಗವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರ ನಿವಾಸ ಮತ್ತು ಇತರ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ ಇಂದು ಬೆಳಗ್ಗೆ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ.

ಕೋಲ್ಕತ್ತಾ ಮೂಲದ ಕಂಪನಿಯೊಂದರ ಹವಾಲಾ ಹಣಕ್ಕೆ ಸಂಬಂಧಿಸಿದಂತೆ ದಾಳಿ ನಡೆದಿದೆ. ಮೇ 30 ರಂದು ಸತ್ಯೇಂದ್ರ ಜೈನ್ ಅವರನ್ನು ಬಂಧಿಸಿದ ಇಡಿ ಜೂನ್ 9ರ ವರೆಗೆ ಕಸ್ಟಡಿಗೆ ಪಡೆದುಕೊಂಡಿದೆ.

ಇದಕ್ಕೂ ಮೊದಲು ಏಪ್ರಿಲ್ ನಲ್ಲಿ ಇಡಿ ಅಕಿಂಚನ್ ಡೆವಲಪರ್ಸ್ ಪ್ರೈವೇಟ್ ಕಂಪನಿ ಒಡೆತನದ 4.81 ಕೋಟಿ ಮೌಲ್ಯದ ಸ್ಥಿರಾಸ್ತಿಗಳನ್ನು ಜಪ್ತಿ ಮಾಡಿತ್ತು. ಲಿಮಿಟೆಡ್, ಇಂಡೋ ಮೆಟಲ್ ಇಂಪೆಕ್ಸ್ ಪ್ರೈವೇಟ್ ಲಿಮಿಟೆಡ್, ಮತ್ತು ಇತರರು ಅಕ್ರಮ ಆಸ್ತಿ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈನ್, ಅವರ ಪತ್ನಿ ಪೂನಂ ಜೈನ್ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಸಿಬಿಐ ದಾಖಲಿಸಿದ ಎಫ್ಐಆರ್ ಆಧರಿಸಿ ಇಡಿ ಜೈನ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದೆ.