ಅಗ್ನಿ ಅವಘಡ – ಒಂದೇ ಕುಟುಂಬದ ಆರು ಮಂದಿ ಸಜೀವ ದಹನ…

52
firstsuddi

ಹೈದರಾಬಾದ್ : ಮನೆಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಒಂದೇ ಕುಟುಂಬದ 6 ಮಂದಿ ಸಜೀವ ದಹನಗೊಂಡಿರುವ ಘಟನೆ ತೆಲಂಗಾಣದ ಮಂಚಾರ್ಯಾಲ ಜಿಲ್ಲೆಯ ಮಂದಮರ್ರಿ ತಾಲೂಕಿನ ವೆಂಕಟಾಪುರದಲ್ಲಿ ನಡೆದಿದೆ.

ಮನೆಯ ಯಜಮಾನ, ಶಿವಯ್ಯ (50), ಪದ್ಮಾ (45), ಪದ್ಮಾ ಅವರ ತಂಗಿ ಮಗಳು ಮೌನಿಕ (23) ಮತ್ತು ಆಕೆಯ ಇಬ್ಬರು ಮಕ್ಕಳು ಸಜೀವ ದಹನಗೊಂಡಿದ್ದಾರೆ. ರಾತ್ರಿ ಊಟ ಮಾಡಿ ಮಲಗಿದ ಬಳಿಕ 12 ರಿಂದ 12:30ರ ವೇಳೆಗೆ ಏಕಾಏಕಿ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮನೆಯಲ್ಲಿದ್ದವರೆಲ್ಲ ನಿದ್ದೆಯಲ್ಲಿದ್ದ ಪರಿಣಾಮ ಬೆಂಕಿಯ ಕೆನ್ನಾಲಿಗೆ ಬಲಿಯಾಗಿದ್ದಾರೆ.

ಮನೆಯಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಘಟನಾ ಸ್ಥಳಕ್ಕೆ ಬರುತ್ತಿದ್ದಂತೆ ಮನೆ ಸಂಪೂರ್ಣ ಬೆಂಕಿಗಾಹುತಿ ಆಗಿತ್ತು. ಘಟನೆಗೆ ಕಾರಣ ಏನು ಎಂಬ ಕುರಿತು ತನಿಖೆ ಆರಂಭಿಸಿದ್ದೇವೆ ಎಂದು ಮಂದಮರ್ರಿಯ ಸರ್ಕಲ್ ಇನ್ಸ್‌ಪೆಕ್ಟರ್‌ ಪ್ರಮೋದ್ ಕುಮಾರ್ ತಿಳಿಸಿದ್ದಾರೆ.