ಡೆಹ್ರಾಡೂನ್ : ಶಾರ್ಟ್ ಸರ್ಕ್ಯೂಟ್ ನಿಂದಾಗಿ ದೆಹಲಿ-ಡೆಹ್ರಾಡೂನ್ ಶತಾಬ್ದಿ ಎಕ್ಸ್ ಪ್ರೆಸ್ ರೈಲಿನ ಸಿ 4 ಕಂಪಾರ್ಟ್ಮೆಂಟ್ ನಲ್ಲಿ ಅಗ್ನಿ ಅವಘಡ ಸಂಭವಿಸಿದೆ.
ಉತ್ತರಾಖಂಡದ ಹರಿದ್ವಾರದ ಕಾನ್ಸ್ರೋ ಬಳಿ ಈ ಘಟನೆ ನಡೆದಿದ್ದು, ರೈಲಿನಲ್ಲಿ ಸಂಚರಿಸುತ್ತಿದ್ದ ಪ್ರಯಾಣಿಕರನ್ನು ಕೂಡಲೇ ರಕ್ಷಣೆ ಮಾಡಲಾಗಿದೆ. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಉತ್ತರಖಂಡದ ಡಿಜಿಪಿ ಅಶೋಕ್ ಕುಮಾರ್ ಅವರು ತಿಳಿಸಿದ್ದಾರೆ.










