ಅಜೇಂದ್ರ ಶೆಟ್ಟಿ ಹತ್ಯೆ ಪ್ರಕರಣ ; ಪಾಲುದಾರ ಅನೂಪ್ ಶೆಟ್ಟಿ ಬಂಧನ…

77
firstsuddi

ಉಡುಪಿ : ಫೈನಾನ್ಶಿಯರ್ ಅಜೇಂದ್ರ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಲುದಾರ ಅನೂಪ್ ಶೆಟ್ಟಿಯನ್ನು ಬಂಧಿಸಲಾಗಿದೆ.

ಆರೋಪಿ ಅನೂಪ್ ಶೆಟ್ಟಿ ಈ ಮೊದಲು ದುಬೈ ಮತ್ತು ಸಿಂಗಾಪೂರದಲ್ಲಿ ಕೆಲಸ ಮಾಡಿಕೊಂಡಿದ್ದು ಬಳಿಕ ಊರಿಗೆ ಮರಳಿ ಅಜೇಂದ್ರ ಶೆಟ್ಟಿಯೊಂದಿಗೆ ಸೇರಿಕೊಂಡು ಫೈನಾನ್ಸ್ ವ್ಯವಹಾರ ಮಾಡಿಕೊಂಡಿದ್ದ. ಫೈನಾನ್ಸಿನ ಹಣಕಾಸು ವಿಚಾರದಲ್ಲಿ ಮನಸ್ತಾಪ ಉಂಟಾಗಿ ಅಜೇಂದ್ರ ಶೆಟ್ಟಿಯನ್ನು ಕೊಲೆ ಮಾಡಿದ್ದಾಗಿ ಪಾಲುದಾರ ಅನೂಪ್ ಶೆಟ್ಟಿ ಒಪ್ಪಿಕೊಂಡಿದ್ದಾನೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ್ ಅವರು ಮಾಹಿತಿ ನೀಡಿದ್ದಾರೆ.

ಗೋವಾದ ಕೊಲ್ವಾ ಬೀಚ್ ಬಳಿ ಆರೋಪಿಯನ್ನು ಬಂಧಿಸಲಾಗಿದ್ದು, ಸದ್ಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಕುಂದಾಪುರ ತಾಲ್ಲೂಕಿನ ಕೋಟೇಶ್ವರ ಸಮೀಪದ ಕಾಳಾವರದಲ್ಲಿ ಫೈನಾನ್ಸ್ ವ್ಯವಹಾರ ನಡೆಸುತ್ತಿದ್ದ ಯಡಾಡಿ ಮತ್ಯಾಡಿ ಕೂಡಲ್ ನಿವಾಸಿ ಅಜೇಂದ್ರ ಶೆಟ್ಟಿ ಎಂಬವರನ್ನು ಹತ್ಯೆ ಮಾಡಲಾಗಿತ್ತು.